ಜಿಲ್ಲೆಯ ವಿವಿಧೆಡೆ ನಾಳೆ ನಡೆಯಲಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಭೇಟಿ:

ಕೋಲಾರ, ಏ.6-ಜಿಲ್ಲೆಯ ವಿವಿಧೆಡೆ ನಾಳೆ ನಡೆಯಲಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಭೇಟಿ ನೀಡಲಿದ್ದಾರೆ.
ರಾಹುಲ್‍ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡು ಮಲೆಗೆ ಆಗಮಿಸಿ ಗಣಪತಿಗೆ ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 12.45ಕ್ಕೆ ಮುಳಬಾಗಿಲಿನ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ನಂತರ ಮುಳಬಾಗಿಲಿನಿಂದ ಕೆಜಿಎಫ್‍ಗೆ ತೆರಳಿ ಬಹಿರಂಗ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಂಗಾರಪೇಟೆಯಲ್ಲಿ ರೋಡ್ ಶೋ ನಡೆಸಿ 4.30ಕ್ಕೆ ಕೋಲಾರಕ್ಕೆ ಆಗಮಿಸಿ ಮೆರವಣಿಗೆಯೊಂದಿಗೆ ಕ್ಲಾಕ್ ಟವರ್‍ನಲ್ಲಿ ಸಭೆ ನಡೆಸಲಿದ್ದಾರೆ. (ಕಾರ್ನರ್ ಮೀಟಿಂಗ್), ಸಂಜೆ 5.30ಕ್ಕೆ ದೇವರಾಜ್ ಸೆಂಟ್ರಲ್ ಕಾಲೇಜಿನ ಬಳಿ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ 5.55ಕ್ಕೆ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಚಿಕ್ಕಬಳ್ಳಾಪುರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾತ್ರಿ 8 ಗಂಟೆಗೆ ರಸ್ತೆ ಮಾರ್ಗದಲ್ಲಿ ಬೆಂಗಳೂರಿಗೆ ತಲುಪಲಿದ್ದಾರೆ. ಸರ್ಕಾರದಡಿ ಕೇಂದ್ರ ಎಸ್‍ಪಿಜಿ ರವರು ಆಗಮಿಸಿ ಕಾರ್ಯಕ್ರಮದ ಉಸ್ತುವಾರಿ ವಹಿಸಲಿದ್ದಾರೆ.
ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಚಿವ ರಮೇಶ್‍ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ