ಬೆಂಗಳೂರು, ಏ.6-ನಮ್ಮ ತಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ನಮ್ಮ ಮನೆ ಮುಂದೆ ಬಂದು ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದನ್ನು ಮರೆತುಬಿಟ್ಟಿದ್ದಾರೆಯೇ ಎಂದು ಪುತ್ರ ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನನಗೆ ಕಾಂಗ್ರೆಸ್‍ನಲ್ಲಿ ಉಸಿರುಗಟ್ಟುವ ವಾತಾವರಣವಿದೆ. ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಎಂದು ನಮ್ಮ ತಂದೆ ಮುಂದೆ ಕೈಕಟ್ಟಿ ನಿಂತಿದ್ದರು. ಇದು ಸುಳ್ಳೋ, ನಿಜವೋ ಎಂಬುದನ್ನು ಮುಖ್ಯಮಂತ್ರಿ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ನಾನು ಪ್ರಸ್ತಾಪ ಮಾಡಿದ ವಿಷಯಗಳಿಗೆ ಸಿದ್ದರಾಮಯ್ಯ ಇನ್ನು ಪ್ರತಿಕ್ರಿಯೆ ನೀಡಿಲ್ಲ. ನನ್ನ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರು ಸಹಮತ ವ್ಯಕ್ತಪಡಿಸಿದ್ದಾರೆ ಎಂಬುದನ್ನು ಮಾಧ್ಯಮಗಳಿಂದ ತಿಳಿದಿದ್ದೇನೆ. ಸಿದ್ದರಾಮಯ್ಯನವರು ಇದಕ್ಕೆ ಪ್ರತಿಕ್ರಿಯೆ ನೀಡಿದ ನಂತರ ಮತ್ತೆ ಮಾತನಾಡುತ್ತೇನೆ ಎಂದರು.
ಮೈಸೂರಿಗೆ ಭೇಟಿ ಕೊಟ್ಟ ವೇಳೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸ್ಥಳೀಯ ಕಾರ್ಯಕರ್ತರ ಜತೆ ನನ್ನನ್ನು ಕಣಕ್ಕಿಳಿಸಲು ಒತ್ತಾಯಿಸಿದ್ದಾರೆ. ಅಂತಿಮವಾಗಿ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು.
ಅಂತಿಮವಾಗಿ ನನ್ನದು ರಾಷ್ಟ್ರೀಯ ಪಕ್ಷವಾಗಿರುವುದರಿಂದ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ತಿಳಿದಿಲ್ಲ. ಯಾರಿಗೆ ಟಿಕೆಟ್ ಕೊಟ್ಟರೂ ಪಕ್ಷದ ಪರ ಕೆಲಸ ಮಾಡಲು ಸಿದ್ಧ ಎಂದು ಘೋಷಿಸಿದರು.
ವರುಣಾದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಕಣಕ್ಕಿಳಿಯುತ್ತಿರುವುದರಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ. ನನಗಾಗಲಿ, ಇನ್ನಿತರಿಗಾಗಲಿ ಟಿಕೆಟ್ ನೀಡಿದರೆ ಅಭ್ಯಂತರವಿಲ್ಲ. ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದರು.
ವರುಣಾ ಚುನಾವಣೆಗೆ ಬಿಎಸ್‍ವೈ ್ಖo ಸಿದ್ದರಾಮಯ್ಯ, ಯತೀಂದ್ರ ್ಖo ವಿಜಯೇಂದ್ರ ಅಲ್ಲ. ಬಿಜೆಪಿ ್ಖo ಕಾಂಗ್ರೆಸ್ ನಡುವಿನ ಹಣಾಹಣಿ ಅಂತಿಮವಾಗಿ ಜನಾದೇಶಕ್ಕೆ ನಾವೆಲ್ಲರೂ ತಲೆಬಾಗಲೇಬೇಕು ಎಂದು ಹೇಳಿದರು.