ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಕಾರು ಹರಿದ ಪರಿಣಾಮ ಸ್ಥಳದಲ್ಲೇ ಸಾವು

ಕೋಲಾರ, ಏ.6-ಮನೆ ಮುಂದೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ತಾಲೂಕಿನ ನರಿನತ್ತಮ್ ಗ್ರಾಮದಲ್ಲಿ ನಡೆದಿದೆ.

ಕೃತಿಜ್ಞ ಮೃತಪಟ್ಟ ಹೆಣ್ಣು ಮಗು.

ಸುರೇಶ್ ಹಾಗೂ ಸಂಗೀತ ದಂಪತಿ ಪುತ್ರಿ ಕೃತಿಜ್ಞ ಇಂದು ಬೆಳಗ್ಗೆ ಮನೆ ಮುಂದೆ ಆಟವಾಡುತ್ತಿದ್ದಾಗ ವೇಗವಾಗಿ ಬಂದ ಟವೇರಾ ಕಾರು ಮಗುವಿನ ಮೇಲೆ ಹರಿದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದೆ.

ಈ ಸಂಬಂಧ ಕಾಮಸಮ್ರುದ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ