ಬೆಂಗಳೂರು:ಏ-6: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಬ್ಬ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇತ್ತೀಚೆಗೆ ಸೈಕೋ ಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಿನಲ್ಲೇ ಈಗ ಮತ್ತೊಬ್ಬ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾಸ್ತಿ ಕುಮಾರ್(32) ಎಂಬಾತ ಜೈಲಿನ ಎ ಬ್ಯಾರಕ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೈದಿ. ಶಿವಮೊಗ್ಗ ಮೂಲದವನಾದ ಈತ 10 ತಿಂಗಳ ಹಿಂದೆ ಸಜಾ ಬಂದಿಯಾಗಿ ಜೈಲು ಸೇರಿದ್ದ ಎಂದು ತಿಳಿದು ಬಂದಿದೆ.
ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಸೆಲ್ ಒಳಗಿನ ಕಿಟಕಿಗೆ ಪಂಚೆಯಿಂದ ನೇಣುಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಾಸ್ತಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಕ್ಷಿಣೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಈತ ಒಳಗಾಗಿದ್ದ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದ್ದು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Prisoner,committed,Suicide,Bengaluru,Parappana Agrahara central jail