ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿ 45 ಸಾವಿರ ಮೌಲ್ಯದ ಚಿನ್ನಾಭರಣ ದರೋಡೆ

ಬೆಂಗಳೂರು, ಏ.6-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು 45 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ 2,500 ರೂ. ಹಣ ದೋಚಿರುವ ಘಟನೆ ಬೈಯ್ಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಗ್ಗದಾಸಪುರದ 5ನೆ ಮುಖ್ಯರಸ್ತೆ, 8ನೆ ಕ್ರಾಸ್ ನಿವಾಸಿ ಮುನಿರಾಜು ಕುಟುಂಬ ನಿನ್ನೆ ಬೆಳಗ್ಗೆ ಕಾರ್ಯನಿಮಿತ್ತ ಹೊರಹೋಗಿತ್ತು. ಈ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಬೀಗ ಮುರಿದು ಒಳನುಗ್ಗಿ ಬೀರುವನ್ನು ಒಡೆದು ಅದರಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಕೈಗೆ ಸಿಕ್ಕ ಹಣ, ಆಭರಣದೊಂದಿಗೆ ಪರಾರಿಯಾಗಿದ್ದಾರೆ.

ಸಂಜೆ ಆರು ಗಂಟೆ ಸಮಯದಲ್ಲಿ ಮುನಿರಾಜು ಮನೆಗೆ ವಾಪಸ್ಸಾದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಮನೆಗಳ್ಳತನ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ