ಸರ್ಕಾರಿ ಪ್ರೌಢ ಶಾಲೆಗೆ ಒತ್ತಾಯಿಸಿ ಪ್ರಧಾನಿಗೆ ರಕ್ತದಲ್ಲಿ 6 ಪುಟಗಳ ಪತ್ರ ಬರೆದ ಯುವಕ

ವಿಜಯಪುರ:ಏ-6: ವಿಜಯಪುರದ ಯುವಕನೊಬ್ಬ ತಮ್ಮೂರಿಗೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 6 ಪುಟಗಳ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿ ವಿಜಯರಂಜನ ಜೋಶಿ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದಿರುವ ಯುವಕ. ಸುಮಾರು 15 ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳು ಯಾವುದೂ ಇಲ್ಲ. ಈ ಹಿನ್ನೆಲೆ ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ, ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಸತ್ತು ಶವವಾಗಿದೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದಾನೆ.

ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳು ಕಲಿಯಲು ಆಗುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಬರಗಾಲ, ಬಡತನ ಇರುವುದರಿಂದ ಖಾಸಗಿ ಶಾಲೆಗಳಲ್ಲಿ ಕಲಿಸುವಷ್ಟು ಇಲ್ಲಿನ ಜನರು ಶ್ರೀಮಂತರಲ್ಲ. ಸರ್ಕಾರಿ ಶಾಲೆ ಇಲ್ಲದೆ ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ಪತ್ರದಲ್ಲಿ ವಿಜಯರಂಜನ ಉಲ್ಲೇಖಿಸಿದ್ದಾನೆ.

ನನಗೆ ತುಂಬ ನೋವಾಗಿದೆ, ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಪತ್ರ ಬರೆದಿದ್ದೇನೆ ಎಂದು ವಿಜಯರಂಜನ ತನ್ನ ರಕ್ತದಲ್ಲಿ ಆರು ಪುಟಗಳ ಪತ್ರ ಬರೆದಿದ್ದಾನೆ.

Vijayapura, boy write,Blood Letter, PM Narendra Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ