ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು : ಮೇಸ್ತ್ರಿಗಳ ಮಹಾಸಂಘದ ಅಧ್ಯಕ್ಷ ಜೇರಿಮ್

ಬೆಂಗಳೂರು,ಏ.6- ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು. ಆದರೂ ಅವರ ವಿರುದ್ದ ಕಾಂಗ್ರೆಸ್ ಸರ್ಕಾರ ಆರೋಪ ಮಾಡತ್ತಿದೆ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಗುತ್ತಿಗೆ ಪೌರಕಾರ್ಮಿಕ ಹಾಗೂ ಮೇಸ್ತ್ರಿಗಳ ಮಹಾಸಂಘದ ಅಧ್ಯಕ್ಷ ಜೇರಿಮ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಖಾಲಿಯಿದ್ದ 4 ಸಾವಿರ ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಆದೇಶ ನೀಡಿದ್ದರು ಹಾಗೂ ಪೌರಕಾರ್ಮಿಕರಿಗಾಗಿ ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗವನ್ನೂ ಮಾಡಿದ್ದರು ಎಂದು ಹೇಳಿದರು.

ಗುತ್ತಿಗೆ ಪೌರ ಕಾರ್ಮಿಕರಿಗೆ ಕನಿಷ್ಠ ವೇತನವನ್ನು 2700 ನೀಡುತ್ತಿದ್ದು ಆ ವೇತನವನ್ನು 7500 ರೂ.ಗೆ ಹೆಚ್ಚಿಸಿದರು.ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇಡಲು ಆದೇಶ ನೀಡಿz್ದರು ಇಂಥವರ ಮೇಲೆ ಇಲ್ಲಸಲ್ಲದ ಆರೋಪವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ