ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ: ವಿಶೇಷ ಪೂಜೆ

ಕೋಲಾರ:ಏ-7:ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಜನಾಶಿರ್ವಾದ ಯಾತ್ರೆ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲಿಎ ಭೇಟಿ ನೀಡಿದರು.

ಮುಳಬಾಗಿಲಿನ ಕುರುಡುಮಲೆಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದ ರಾಹುಲ್ ಗಾಂಧಿ, ಬಳಿಕ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಕುಂಕುಮಾರ್ಚನೆ, ಪುಷ್ಪಾರ್ಚನೆ ಸೇರಿದಂತೆ ವಿಶೇಷ ಪೂಜೆ ನೆರವೇರಿಸಲಾಯಿತು. ರಾಹುಲ್ ಆಗಮನ ಹಿನ್ನೆಲೆ ದೇವಾಲಯಕ್ಕೆ ಹೂವಿನಿಂದ ಅಲಂಕಾರ ಮಾಡಲಾಗಿತ್ತು.

ಸಿಎಂ ಸಿದ್ದರಾಮಯ್ಯ, ಸಚಿವ ರಮೇಶಕುಮಾರ, ರಾಜೀವಗೌಡ, ಡಿಕೆಶಿವಕುಮಾರ್, ಜಿ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ವೀರಪ್ಪ ಮೊಯಿಲಿ ಸೇರಿ ಇತರೆ ಮುಖಂಡರು ಸಾಥ್ ನೀಡಿದರು.

ಬಳಿಕ ರಾಹುಲ್‌ ಗಾಂಧಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದರು.

Assembly election,rahul gandhi,kolar,janashirvada yatre,kurudumale ganapati temple

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ