ಬೆಂಗಳೂರು, ಏ.7-ಪಾರ್ಟಿ ಮುಗಿಸಿಕೊಂಡು ಸ್ನೇಹಿತನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಬಿಎ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಆರ್ಟಿ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತೆಲಂಗಾಣ ಮೂಲದ ಸಂದೀಪ್ (23) ಮೃತಪಟ್ಟ ಎಂಬಿಎ ವ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಸ್ನೇಹಿತ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ನಾಗಶೆಟ್ಟಿಹಳ್ಳಿಯಲ್ಲಿ ಸಂದೀಪ್ ವಾಸವಾಗಿದ್ದು, ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದನು.
ರಾತ್ರಿ ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡಿದ್ದು, ಇಂದು ಮುಂಜಾನೆ 1.30ರಲ್ಲಿ ಸಂದೀಪ್ ತನ್ನ ಬೈಕ್ನಲ್ಲಿ ಸ್ನೇಹಿತನನ್ನು ಕೂರಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಟ್ಯಾಂಕ್ಬಂಡ್ ರಸ್ತೆಯ ಆರ್ಎಂವಿ ಕ್ಲಬ್ ಮುಂಭಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದೆ.
ಪರಿಣಾಮವಾಗಿ ಸಂದೀಪ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಸುದ್ದಿ ತಿಳಿದ ಆರ್ಟಿ ನಗರ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.