ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ವಿರುದ್ಧ ಎಫ್ ಐ ಆರ್ ದಾಖಲು

ಚಿತ್ರದುರ್ಗ: ಏ-೭:ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಗುಜರಾತ್‌ನ ವಡಗಾಂವ್ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ನಗರ ಠಾಣೆಯಲ್ಲಿ ದಾಖಲಿಸಿದ್ದಾರೆ. ‘ಸಂವಿದಾನ ಉಳಿವಿಗಾಗಿ ಕರ್ನಾಟಕ’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣದ ಮಾಡಿರುವ ಬಗ್ಗೆ ಜಿಲ್ಲೆಯ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದೂರು ನೀಡಿದ್ದರು.

ಈ ಹಿನ್ನಲೆಯಲ್ಲಿ ವಿವಿಟಿ ಮತ್ತು ವಿಎಸ್‌ಟಿ ತಂಡ ನೀಡಿದ ವರದಿ ಪರಿಶೀಲಿಸಿ ಎಫ್ ಐ ಆರ್ ದಾಖಲಿಸಲಾಗಿದೆ.

ಮೇವಾನಿ ಭಾಷಣದಿಂದ ದೊಂಬಿ ಗಲಾಟೆಗಳಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿರುವುದರಿಂದ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕ ಟಿ. ಷಫೀಉಲ್ಲಾ ಮೇಲೆ ಕಾನೂನು ಕ್ರಮ ಜರುಗಿಸಲು ಸರಕಾರದ ಪರವಾಗಿ ದೂರು ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದಾಗ ಕುರ್ಚಿಗಳನ್ನು ಗಾಳಿಗೆ ತೂರಿ, ಗದ್ದಲ ಮಾಡಿ ಎಂದು ಮೇವಾನಿ ಕರೆ ನೀಡಿದ್ದರು. 15 ಲಕ್ಷ ರೂಪಾಯಿ ಎಲ್ಲಿ, ಉದ್ಯೋಗ ಸೃಷ್ಟಿ ಎಷ್ಟು ಮಾಡಿದ್ದೀರಿ ಎಂದು ಪ್ರಶ್ನಿಸಿ. ಇದನ್ನು ಮಾಡಲು ಆಗದಿದ್ದರೆ ಹಿಮಾಲಯಕ್ಕೆ ಹೋಗಿ ರಾಮಮಂದಿರದ ಘಂಟೆ ಬಾರಿಸಲು ಹೇಳಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಜಿಗ್ನೇಶ್ ಮೇವಾನಿ ವಿರುದ್ಧ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Gujarat MLA Jignesh mevani,FIR,Chitradurga

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ