ಏ.15ರಂದು 42 ಜಿಲ್ಲಾ ಲಯನ್ಸ್ ಕ್ಲಬ್ ಸಮರ್ಪಣೆ ಸಮಾವೇಶ

 

ಬೆಂಗಳೂರು, ಏ.7- ಇಂಟರ್ ನ್ಯಾಷನಲ್ ಲಯನ್ಸ್ ಕ್ಲಬ್ ವತಿಯಿಂದ ನ್ಯಾಷನಲ್ ಲಯನ್ಸ್ ಕ್ಲಬ್‍ವತಿಯಿಂದ 42 ಜಿಲ್ಲಾ ಲಯನ್ಸ್ ಕ್ಲಬ್ ಸಮರ್ಪಣೆ ಸಮಾವೇಶವನ್ನು ಏ.15ರಂದು ವಿಜಯನಗರದ ಭಂಟರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಗವರ್ನರ್ ಜೆ.ಪಿ.ದಿವಾಕರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಧತ್ವ ನಿವಾರಣೆ, ಅನ್ನದಾನ, ಶಿಕ್ಷಣಕ್ಕೆ ನೆರವು, ಪರಿಸರ ಸಂರಕ್ಷಣೆ, ಶಿಶು ಕ್ಯಾನ್ಸರ್ ನಿಯಂತ್ರಣ ಇತ್ಯಾದಿ ಕಾರ್ಯಕ್ರಮಗಳಲ್ಲಿ ನಮ್ಮ ಕ್ಲಬ್ ತೊಡಗಿಸಿಕೊಂಡಿದೆ. ಈ ಬಾರಿ ಸಮರ್ಪಣೆ ಕಾರ್ಯಕ್ರಮದಲ್ಲಿ ಅವಶ್ಯವಿರುವ ಮಹಿಳೆಯರು ಹಾಗೂ ಶೋಷಿತ ವರ್ಗದ ಮಹಿಳೆಯರಿಗೆ ಉಚಿತವಾಗಿ ಒಂದು ಲಕ್ಷಕ್ಕೂ ಹೆಚ್ಚು ಶುದ್ಧ ಸ್ಯಾನಿಟರಿ ನ್ಯಾಪ್‍ಕಿನ್‍ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 120ಕ್ಕೂ ಹೆಚ್ಚು ಲಯನ್ಸ್ ಕ್ಲಬ್‍ಗಳು, ಸಾವಿರಕ್ಕೂ ಹೆಚ್ಚು ಸದಸ್ಯರು ಭಾಗವಹಿಸುವರು. ಕಾರ್ಯಕ್ರಮವನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್‍ನ ಸಂಸ್ಥಾಪಕರು, ಅಧ್ಯಕ್ಷರಾದ ವೈ.ಕೆ.ಮುದ್ದುಕೃಷ್ಣ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಲಯನ್ಸ್‍ನ ಉಮೇಶ್, ಶ್ರೀನಾಥ್, ಸುರೇಶ್ ಮತ್ತಿತರರು ಉಪಸ್ಥಿತಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ