ಬೆಂಗಳೂರು, ಏ.7-ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಬ್ಯಾನರ್ ಅಳವಡಿಕೆಗೆ ಅವಕಾಶವಿಲ್ಲದಿದ್ದರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದವರೇ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಬೃಹತ್ ಬ್ಯಾನರ್‍ಗಳನ್ನು ಅಳವಡಿಸುವ ಮೂಲಕ ನೀತಿ-ಸಂಹಿತೆ ಉಲ್ಲಂಘಿಸಿದ್ದಾರೆ.
ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಇಂದು ಬೆಳಗ್ಗೆ ನಗರಕ್ಕೆ ಆಗಮಿಸುತ್ತಾರೆ ಎಂಬ ವಿಷಯ ತಿಳಿದ ಕಾಂಗ್ರೆಸಿಗರು ರಾತ್ರೋರಾತ್ರಿಯೇ ಏರ್‍ಪೆÇೀರ್ಟ್ ರಸ್ತೆ ಮತ್ತು ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಬೃಹತ್ ಕಟೌಟ್‍ಗಳನ್ನು ಅಳವಡಿಸಿ ನೀತಿ-ಸಂಹಿತೆ ಉಲ್ಲಂಘಿಸಿದ್ದಾರೆ.
ಏರ್‍ಪೆÇೀರ್ಟ್ ರಸ್ತೆಯಲ್ಲಿ ರಾಹುಲ್‍ಗಾಂಧಿ ಅವರಿಗೆ ಸ್ವಾಗತ ಕೋರುವ ಬೃಹತ್ ಕಟೌಟ್‍ಗಳು ಹಾಗೂ ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗದ ಹಡ್ಸನ್ ಸರ್ಕಲ್‍ನಲ್ಲಿ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಮತ್ತಿತರ ನಾಯಕರ ಭಾವಚಿತ್ರವಿರುವ ಆಳುದ್ದದ ಕಟೌಟ್‍ಗಳು ರಾರಾಜಿಸುತ್ತಿವೆ.
ತಕ್ಷಣ ಕಾರ್ಯಪ್ರವೃತ್ತರಾದ ಬಿಬಿಎಂಪಿ ಸಿಬ್ಬಂದಿಗಳು ಕಟೌಟ್ ಮತ್ತು ಬ್ಯಾನರ್‍ಗಳನ್ನು ತೆರವುಗೊಳಿಸಿದರು.