ಭಾರತ ಮತ್ತು ನೇಪಾಳ ನಡುವೆ ರಕ್ಷಣೆ ಮತ್ತು ಭದ್ರತೆ ಉತ್ತಮವಾಗಿದೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಏ.7-ಭಾರತ ಮತ್ತು ನೇಪಾಳ ನಡುವೆ ರಕ್ಷಣೆ ಮತ್ತು ಭದ್ರತೆ ವಿಷಯದಲ್ಲಿ ನಿಕಟ ಸಂಪರ್ಕವಿದ್ದು, ಉಭಯ ದೇಶಗಳ ಗಡಿ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ ಮತ್ತು ನೇಪಾಳ ಪ್ರಧಾನಿ ಕೆ.ಪಿ. ಓಲಿ ರಾಜಧಾನಿ ದೆಹಲಿಯಲ್ಲಿ ಇಂದು ಮಹತ್ವದ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಹಿಮಾಲಯ ರಾಷ್ಟ್ರದ ಪ್ರಧಾನಿಯಾದ ನಂತರ ಮೊದಲ ಬಾರಿ ವಿದೇಶ ಪ್ರವಾಸ ಕೈಗೊಂಡ ಓಲಿ ಮೂರು ದಿನಗಳ ಬೇಟಿಗಾಗಿ ಭಾರತದಲ್ಲಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಅವರು ಉಭಯ ದೇಶಗಳ ದ್ವಿಪಕ್ಷೀಯ ಸಹಕಾರ ಕುರಿತು ಚರ್ಚಿಸಿದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡೂ ದೇಶಗಳ ನಡುವೆ ಅನೇಕ ವಿಷಯಗಳಲ್ಲಿ ದ್ವಿಪಕ್ಷೀಯ ಒಪ್ಪಂದಗಳಾಗಿವೆ. ರಕ್ಷಣೆ ಮತ್ತು ಭದ್ರತೆ ವಿಷಯದಲ್ಲಿ ನಿಕಟ ಸಂಪರ್ಕವಿದ್ದು, ಉಭಯ ದೇಶಗಳ ಗಡಿ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ ಎಂದು ಒತ್ತೆ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ