ಬ್ಯಾಂಕ್‍ವೊಂದರ ಅಸಿಸ್ಟೆಂಟ್ ಮ್ಯಾನೇಜರ್‍ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೈಸೂರು,ಏ.8- ಬ್ಯಾಂಕ್‍ವೊಂದರ ಅಸಿಸ್ಟೆಂಟ್ ಮ್ಯಾನೇಜರ್‍ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಳಗಾವಿಯ ಶರತ್ ಕಲಪನವರ (25) ಆತ್ಮಹತ್ಯೆ ಮಾಡಿಕೊಂಡಿರುವ ಅಸಿಸ್ಟೆಂಟ್ ಮ್ಯಾನೇಜರ್. ನಗರದ ಕರೂರು ವೈಶ್ಯ ಬ್ಯಾಂಕ್‍ನಲ್ಲಿ ಇವರು ಅಸಿಸ್ಟೆಂಟ್ ಮ್ಯಾನೇಜರಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೆ ಬೆಳಗಾವಿಯಿಂದ ನಗರಕ್ಕೆ ವರ್ಗಾವಣೆಗೊಂಡು ಬಂದಿದ್ದರು.
ನಗರದ ಗನ್‍ಹೌಸ್ ಬಳಿ ಸ್ನೇಹಿತರೊಂದಿಗೆ ಬಾಡಿಗೆ ಮನೆಯಲಿ ವಾಸವಾಗಿದ್ದರು.
ಕೊಠಡಿಯಲ್ಲೇ ಫ್ಯಾನ್‍ಗೆ ನೇಣುಬಿಗಿದುಕೊಂಡು ಶರತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗ್ಗೆ ಈ ವಿಷಯ ತಿಳಿದು ಬಂದಿದ್ದು, ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ, ಕ್ಷಮಿಸಿ ಅಣ್ಣ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ