ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ನಿರೀಕ್ಷಿತ 72 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ:ಏ-8: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಬಿಜೆಪಿ ಇಂದು ತನ್ನ ಮೊದಲ ಅಭ್ಯರ್ಥಿಗಳ   ನಿರೀಕ್ಷಿತ  ಪಟ್ಟಿ ಬಿಡುಗಡೆ ಮಾಡಿದೆ.

ಚುನಾವಣಾ ಕಣಕ್ಕಿಳಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲಾಯಿತು.

72 ಅಬ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದ್ದು, ಬಹುತೇಕ ಎಲ್ಲಾ ಹಾಲಿ ಶಾಸಕರಿಗೇ ಅವರವ ಕ್ಷೇತ್ರಗಳಿಂದಲೇ ಟಿಕೆಟ್ ನೀಡಲಾಗಿದೆ. ಸಭೆ ಬಳಿಕ ಜೆ ಪಿ ನಡ್ಡಾ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಗೊಳಿಸಿದರು.

ಇನ್ನು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಅಮಿತ್‌ ಶಾ, ಯಡಿಯೂರಪ್ಪ ಸೇರಿದಂತೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚವ್ಹಾಣ್‌, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌, ಸಂಸದ ಅನಂತಕುಮಾರ್‌, ಪೀಯೂಷ್ ಗೋಯಲ್, ಸಂತೋಷ್ ಹಾಗೂ ಸಮಿತಿ ಸದಸ್ಯರು ಹಾಜರಾಗಿದ್ದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ