ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.8-ಮನೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಟಿಜಿಎಸ್ ಶಾಲೆ ಸಮೀಪದ 6ನೇ ಕ್ರಾಸ್, 1ನೇ ಮುಖ್ಯರಸ್ತೆ ನಿವಾಸಿ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.
ಮಂಜುನಾಥ ಅವರು ರಾತ್ರಿ 7 ಗಂಟೆ ಸಮಯದಲ್ಲಿ ರೂಮ್‍ನಲ್ಲಿ ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದುಬಂದಿಲ್ಲ.
ರಾಜಗೋಪಾಲನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ