ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಕೇಳಿದ್ದಾರೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸ್ಪಷ್ಟ

ಬೆಂಗಳೂರು,ಏ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಕೇಳಿದ್ದಾರೆ. ಉಳಿದಂತೆ ಇನ್ಯಾವ ನಾಯಕರಿಂದಲೂ ಈ ಬೇಡಿಕೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಹೋಟೆಲ್‍ನಲ್ಲಿ ಉಪಹಾರ ಕೂಟ ನಡೆಸಿ ಪತ್ರಕರ್ತರ ಜತೆ ಅನೌಪಚಾರಿಕವಾಗಿ ಮಾತನಾಡಿದ ಅವರು, ಪತ್ರಕರ್ತರಿಂದ ಎದುರಾದ ಪ್ರಶ್ನೆಗೆ ಉತ್ತರಿಸಿದರು.
ಕರ್ನಾಟಕದ ಮಟ್ಟಿಗೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೇಳಿದ್ದಾರೆ. ಉಳಿದ ಯಾವ ನಾಯಕರಿಂದಲೂ ಈ ಬೇಡಿಕೆ ಬಂದಿಲ್ಲ ಎಂದರು.

ತಕ್ಷಣವೇ ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರತ್ತ ತಿರುಗಿ, ಬೇರೆ ನಾಯಕರಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಬೇಡಿಕೆ ಬಂದಿದೆಯೇ ಎಂದು ಕೇಳಿದರು.
ಅದಕ್ಕೆ ವೇಣುಗೋಪಾಲ್ ಇಲ್ಲಾ ಎಂದಾಗ, ಸದ್ಯಕ್ಕೆ ಸಿದ್ದರಾಮಯ್ಯನವರು ಮಾತ್ರ ಎರಡು ಕಡೆ ಸ್ಪರ್ಧಿಸಬಹುದಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ