
ಮಂಡ್ಯ,ಏ.9-ರೈತರ ಬೆಳೆಗಳನ್ನು ಸಂರಕ್ಷಿಸಲು ಮುಂದಾಗಿರುವ ಜಿಲ್ಲಾಡಳಿತ ಕೆಆರ್ಎಸ್ ಜಲಾಶಯದಿಂದ ನಾಲೆಗಳಿಗೆ ಮಧ್ಯರಾತ್ರಿಯಿಂದ ನೀರು ಬಿಡುಗಡೆ ಮಾಡಿರುವುದು ರೈತರ ಮೊಗದಲ್ಲಿ ಸಂತಸ ತಂದಿದೆ.
ವಿರಿಜಾ ನಾಲೆ, ಚಿಕ್ಕದೇವರಾಯ ನಾಲೆ ಮತ್ತು ವಿಶ್ವೇಶ್ವರಯ್ಯ ನಾಲೆಗಳಿಗೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಕಟ್ಟು ಪದ್ದತಿಯಲ್ಲಿ ನಾಲೆಗಳಿಗೆ ನೀರು ಬಿಟ್ಟು ಬೆಳೆಗಳ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿರುವುದರಿಂದ ಸಂಕಷ್ಟದಲ್ಲಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ.
ನಾಲೆಗಳಿಗೆ ನೀರು ಬಿಟ್ಟಿರುವುದರಿಂದ ಬತ್ತಿದ ಬೆಳೆಗಳಿಗೆ ಜೀವ ಬಂದಂತಾಗಿದೆ. ಲಕ್ಷಾಂತರ ಎಕರೆ ಪ್ರದೇಶಗಳಲ್ಲಿ ನಾಟಿ ಮಾಡಿರುವ ಕಬ್ಬು , ಭತ್ತ,ರಾಗಿ ಬೆಳೆಗಾರರು ಸಂತಗೊಂಡಿದ್ದು ಕುಡಿಯುವ ನೀರಿಗೂ ಅನುಕೂಲವಾಗಿದೆ.