
ರಾಮನಗರ, ಏ.9- ಹದಿನೆಂಟು ವರ್ಷ ತುಂಬಿದ ಹಾಗೂ ಮೇಲ್ಪಟ್ಟ ಅರ್ಹ ನಾಗರಿಕರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಲು ಅನುಕೂಲವಾಗುವಂತೆ ಜಿಲ್ಲೆಯ 1140 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಅಭಿಯಾನದಡಿ ಮತದಾರರ ಪಟ್ಟಿಗೆ ಹೆಸರು ದಾಖಲಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ನಡೆದ ಈ ಅಭಿಯಾನದಲ್ಲಿ ಹೊಸದಾಗಿ ಹೆಸರು ದಾಖಲಿಸಲು ಬಯಸಿದ ಆಕಾಂಕ್ಷಿಗಳು ಹತ್ತಿರದ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುತ್ತಿದ್ದುದು ಬಹುತೇಕ ಮತಗಟ್ಟೆಗಳಲ್ಲಿ ಕಂಡುಬಂತು.
ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಹಾಜರಿದ್ದು, ನೋಂದಣಿಗೆ ಅಗತ್ಯ ನೆರವು ನೀಡಿದರು.