ಮಾಜಿ ಶಾಸಕ ವಿಶ್ವನಾಥ್ ಬಿಜೆಪಿಯಿಂದ ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ

ಕಡೂರು, ಏ.9-ಮಾಜಿ ಶಾಸಕ ವಿಶ್ವನಾಥ್ ಬಿಜೆಪಿಯಿಂದ ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ.

ಕೆ.ಎಂ.ಕೃಷ್ಣಮೂರ್ತಿ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಡಾ.ವೈ.ಸಿ.ವಿಶ್ವನಾಥ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ನಡೆದ ಚುನಾವಣೆಯಲ್ಲಿ ಇಲ್ಲಿನ ಜನ ಜೆಡಿಎಸ್‍ನ ವೈ.ಎಸ್.ವಿ.ದತ್ತ ಅವರ ಕೈ ಹಿಡಿದಿದ್ದರು.

ಪ್ರಸ್ತುತ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಹಲವಾರು ಮಂದಿ ಪೈಪೆÇೀಟಿ ನಡೆಸುತ್ತಿದ್ದು, ಡಾ.ವಿಶ್ವನಾಥ್ ಕೂಡ ಸ್ಪರ್ಧಿಸಲು ಮುಂದಾಗಿದ್ದು, ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ.

2013ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದೆ ಬಿಜೆಪಿ ಅಭ್ಯರ್ಥಿಯಾಗಿದ್ದ ಬೀರೂರು ದೇವರಾಜ್ ಅವರಿಗೆ ಬೆಂಬಲ ನೀಡಿದ್ದರು. ಕಳೆದ ಐದು ವರ್ಷಗಳಿಂದ ರಾಜಕೀಯದಿಂದ ದೂರವೇ ಉಳಿದಿದ್ದ ಡಾಕ್ಟರ್ ತಮ್ಮ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.

ಈ ದಿಢೀರನೆ ಬಿಜೆಪಿ ಟಿಕೆಟ್‍ಗಾಗಿ ಕೊನೆ ಹಂತದ ಪ್ರಯತ್ನ ನಡೆಸಿದ್ದಾರೆ.

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ, ಜಗದೀಶ ಶೆಟ್ಟರ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಮಾಜಿ ಉಪ ಮುಖ್ಯಮಂತ್ರಿ ಆರ್. ಆಶೋಕ್ ಮುಂತಾದವರನ್ನು ಭೇಟಿ ಮಾಡಿದ್ದಾರೆ.

ಮಾಜಿ ಶಾಸಕ ವಿಶ್ವನಾಥ್ ಜೊತೆಯಲ್ಲಿ ಕಳೆದ ಬಾರಿ ಅಭ್ಯರ್ಥಿಯಾಗಿದ್ದ ಬೀರೂರು ದೇವರಾಜು, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ, ಗಿರೀಶ್ ಉಪ್ಪಾರ್, ಅರೇಕಲ್ ಪ್ರಕಾಶ್, ಮತಿಘಟ್ಟ ನಾರಾಯಣಸ್ವಾಮಿ ಇವರುಗಳು ಟಿಕೆಟ್ ಆಕಾಂಕ್ಷಿಗಳಾಗಿರುತ್ತಾರೆ.

ಈ ಎಲ್ಲಾ ಮುಖಂಡರುಗಳು ಸೇರಿಕೊಂಡು ಹಿಂದುಳಿದ ವರ್ಗಗಳ ಒಕ್ಕೂಟ ರಚಿಸಿಕೊಂಡು ವೀರಶೈವ ಲಿಂಗಾಯಿತರಿಗೆ ಟಿಕೆಟ್ ನೀಡುವುದಾದರೆ ಮಾಜಿ ಶಾಸಕ ವಿಶ್ವನಾಥ್ ಅವರಿಗೆ ನೀಡಿ, ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡುವುದಾದರೆ ನಮ್ಮ ಐವರಲ್ಲಿ ಯಾರಿಗಾದರೂ ನೀಡಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಾಗುವುದು ಎನ್ನುವುದು ಇವರ ಮನವಿ.

ಈಗಾಗಲೇ ಪರಿವರ್ತನಾ ರ್ಯಾಲಿಗೆ ಕಡೂರು ಪಟ್ಟಣಕ್ಕೆ ಆಗಮಿಸಿದ್ದ ಯಡಿಯೂರಪ್ಪ ಅವರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೆಳ್ಳಿಪ್ರಕಾಶ್ ಎಂದು ನೇರವಾಗಿ ಹೇಳದೆ ತಮ್ಮದೇ ಆದ ದಟಿಯಲ್ಲಿ ಬೆಳ್ಳಿಪ್ರಕಾಶ್ ಅವರಿಗೆ ಖಚಿತ ಎಂದು ಹೇಳಿ ಹೋಗಿರುತ್ತಾರೆ, ಬೆಳ್ಳಿಪ್ರಕಾಶ್ ಬಿಜೆಪಿ ಅಭ್ಯರ್ಥಿ ಖಚಿತ ಎಂದು ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿರುತ್ತಾರೆ, ದಿಢೀರ್ ಬೆಳವಣಿಗೆಯಲ್ಲಿ ವಿಶ್ವನಾಥ್ ಟಿಕೆಟ್‍ಗಾಗಿ ಪ್ರಯತ್ನದಲ್ಲಿ ತೊಡಗಿರುವುದು ಕ್ಷೇತ್ರದ ಜನರಲ್ಲಿ ಅಚ್ಚರಿ ಮೂಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ