
ಬೆಂಗಳೂರು, ಏ.9- ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೊಮ್ಮನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊಂಗಸಂದ್ರದ ಆಂಜನೇಯ ದೇವಸ್ಥಾನ ಸಮೀಪದ ನಿವಾಸಿ ಸುಧಾ (41) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಸುಧಾ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.