ಬೆಂಗಳೂರು,ಏ.9-ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ಪೆÇ್ರ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ರಾಜಲಕ್ಷ್ಮಿ(66) ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನೆರವೇರಿಸಲಾಯಿತು.
ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜಲಕ್ಷ್ಮಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನರಾಗಿದ್ದರು.
ಸಾಹಿತ್ಯ ಪ್ರೇಮಿಯಾಗಿದ್ದ ಅವರು, ಬರಗೂರರ ಸಾಹಿತ್ಯಚಟವಟಿಕೆ ಮತ್ತು ಕ್ರಿಯಾಶೀಲತೆಗೆ ಬೆನ್ನೆಲುಬಾಗಿದ್ದರು.
ಇವರು ಪತಿ ಬರಗೂರು ರಾಮಚಂದ್ರಪ್ಪ , ಮಗಳು ಮೈತ್ರಿ ಬರಗೂರು ಮತ್ತು ಮಗ ಸ್ಫೂರ್ತಿ ಬರಗೂರು ಅವರನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ರಾಜಲಕ್ಷ್ಮಿ ಅವರ ಅಂತ್ಯಕ್ರಿಯೆಯಲ್ಲಿ ಗಣ್ಯರು, ಬಂಧುಮಿತ್ರರು ಹಾಗೂ ಬರಗೂರರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.