ಬೆಂಗಳೂರು, ಏ.10- ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಅತಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಆರ್ ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಅರುಣಾಚಲ ಪ್ರದೇಶದ ನಿವಾಸಿ ವಿಕ್ರಮ್ ಟಿ. (30) ಮೃತಪಟ್ಟ ದುರ್ದೈವಿ.
ವಡ್ಡರಹಳ್ಳಿ-ಟಿಸಿ ಪಾಳ್ಯ ಸರ್ವೀಸ್ ರಸ್ತೆಯ ಮಹಾಲಕ್ಷ್ಮಿ ಟಿಂಬರ್ ಸಮೀಪ ರಾತ್ರಿ 11.30ರಲ್ಲಿ ವಿಕ್ರಮ್ ನಡೆದು ಹೋಗುತ್ತಿದ್ದರು.
ಈ ಸಂದರ್ಭದಲ್ಲಿ ಅತಿವೇಗವಾಗಿ ಮುನ್ನುಗ್ಗಿದ ಯಾವುದೋ ವಾಹನ ಇವರಿಗೆ ಡಿಕ್ಕಿ ಹೊಡೆದಿದ್ದು, ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.
ಡಿಕ್ಕಿಯ ರಭಸಕ್ಕೆ ವಿಕ್ರಮ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೆಆರ್ ಪುರ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಅಪಘಾತವೆಸಗಿರುವ ವಾಹನ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.