ನವದೆಹಲಿ,ಏ.10- ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದಂತಿದೆ.
ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಹಾಗೂ ಬಾದಾಮಿ ವಿಧಾನಸಭಾ ಕ್ಷೇತ್ರ ಎರಡೂ ಕಡೆ ಸ್ಪರ್ಧಿಸಲು ಹೈಕಮಾಂಡ್ ಹಸಿರು ನಿಶಾನೆ ತೋರಿದೆ ಎಂದು ತಿಳಿದುಬಂದಿದೆ.
ಜಾತಿ ಸಮೀಕರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು , ಇದಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಸ್ಪರ್ಧೆ ಖಚಿತವಾಗುತ್ತಿದ್ದಂತೆ ಬಾದಾಮಿ ಕ್ಷೇತ್ರದ ಮುಖಂಡರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ಕೂಡ ನಡೆಸಿದ್ದಾರೆ.
ಕ್ಷೇತ್ರದ ಶಾಸಕ ಚಿಮ್ಮನಕಟ್ಟಿ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಿಎಂ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧಿಸುವುದು ಖಚಿತವಾಗುತ್ತಿದ್ದಂತೆ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಯಿತು.
ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದ ಮುಖಂಡರು ಸಭೆ ನಡೆಸಿದ್ದಾರೆ.