ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ಡಿಸಿ ರೋಹಿಣಿ ಸಿಂಧೂರಿ ಚುನಾವಾಣೆ ನೀತಿ ಸಂಹಿತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸಚಿವರು ದೂರು ನೀಡಿದ್ದಾರೆ. ಉದ್ದೇಶಪೂರ್ವಕವಾಗಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಕೂಡಲೇ ಜಿಲ್ಲಾ ಚುನಾವಣಾಧಿಕಾರಿಯನ್ನು ಬದಲಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಚುನಾವಣಾ ನೀತಿ ಸಂಹಿತೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಡಿಸಿ ಕ್ರಮದ ಬಗ್ಗೆ ತನಿಖೆ ನಡೆಸಬೇಕಾಗಿ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್‌ಗೆ ದೂರು ನೀಡಿದ್ದಾರೆ.
ಇತ್ತೀಚೆಗಷ್ಟೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸಚಿವ ಎ ಮಂಜು ಅವರಿಗೆ ವಿವರಣೆ ಕೋರಿ ನೋಟಿಸ್ ನೀಡಿದ್ದರು. ಇದಕ್ಕೂ ಮೊದಲು ಬಾಹುಬಲಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲೂ ಸಿಂಧೂರಿ ಮತ್ತು ಸಚಿವ ಮಂಜು ಅವರ ನಡುವೆ ತಿಕ್ಕಾಟ ನಡೆದಿತ್ತು.
Hassan DC and election officer Rohini Sindhuri,Minister A Manju,Code of Conduct Misuse,Complaint