ಮೈಸೂರು,ಏ.10- ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ ನಡೆಸಿದರು.
ನಗರದ ಪಡುವಾರ ಹಳ್ಳಿಯಲ್ಲಿಂದು ಜೆಡಿಎಸ್ ಅಭ್ಯರ್ಥಿ ಪೆÇ್ರ.ಕೆ.ಎಸ್.ರಂಗಪ್ಪನವರ ಪರವಾಗಿ ಮತ ಯಾಚನೆ ನಡೆಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಅಭಿವೃದ್ದಿ ಮಾಡಿಲ್ಲ. ಹಾಗೆಯೇ ಕೇಂದ್ರ ಸರ್ಕಾರವು ರಾಜ್ಯದ ಬಗ್ಗೆ ಗಮನಹರಿಸಿಲ್ಲ. ಈ ಹಿನ್ನೆಲೆಯಲ್ಲಿ ಜನರು ಪ್ರಾದೇಶಿಕ ಪಕ್ಷದತ್ತ ಒಲವು ತೋರುತ್ತಿದ್ದು, ಈ ಬಾರಿ ಜೆಡಿಎಸ್‍ಗೆ ಜನ ಬೆಂಬಲಿಸಲಿದ್ದಾರೆ ಎಂದು ಹೇಳಿದರು.
ರಂಗಪ್ಪನವರು ಈವರೆಗೆ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಈಗ ಅವರು ರಾಜಕೀಯಕ್ಕೆ ಬಂದಿದ್ದಾರೆ. ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಟ್ಟಿದ್ದಾರೆ. ಈ ಕ್ಷೇತ್ರದ ಜನತೆ ಅವರನ್ನು ಗೆಲ್ಲಿಸಬೇಕೆಂದು ಮಧು ಬಂಗಾರಪ್ಪ ಮನವಿ ಮಾಡಿದರು.
ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರನನ್ನು ಕಣಕ್ಕಿಳಿಸುತ್ತಿದ್ದಾರೆ. ಹಾಗೆಯೇ ಬಿ.ಎಸ್.ಯಡಿಯೂರಪ್ಪ ಸಹ ತಮ್ಮ ಮಗನನ್ನು ಕಣಕ್ಕಿಳಿಸುತ್ತಿದ್ದಾರೆ. ಇವರೆಡೂ ರಾಷ್ಟ್ರೀಯ ಪಕ್ಷದವರು ತಮ್ಮ ಸ್ವಾರ್ಥವನ್ನು ಪ್ರದರ್ಶಿಸಿದ್ದಾರೆ. ಈ ಚುನಾವಣೆಯಲ್ಲಿ ಇವರಿಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಜೆಡಿಎಸ್ ಅಸ್ತಿತ್ವವನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಮತ್ತು ಕಾಂಗ್ರೆಸ್‍ನ ಆಡಳಿತದಿಂದ ಬೇಸತ್ತಿರುವ ಜನತೆ ಜೆಡಿಎಸ್ ಅಧಿಕಾರಕ್ಕೆ ಬರಬೇಕೆಂದು ಬಯಸಿದ್ದಾರೆ ಎಂದು ಹೇಳಿದರು.
ರಂಗಪ್ಪ ಅವರನ್ನು ಗೆಲ್ಲಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರ ಕೈಯನ್ನು ಬಲಪಡಿಸಬೇಕೆಂದು ಮಧು ಬಂಗಾರಪ್ಪ ಮನವಿ ಮಡಿದರು.
ಈ ವೇಳೆ ಅಭ್ಯರ್ಥಿಪೆÇ್ರ.ರಂಗಪ್ಪ, ಕಾಪೆರ್Çೀರೇಟರ್ ಎಸ್.ಬಿ.ಎಂ.ಮಂಜು ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಹಾಜರಿದ್ದರು.
ಪ್ರಚಾರ ನಡೆಸಿದ ನಂತರ ಮಧು ಬಂಗಾರಪ್ಪ ನೇರ ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಮನೆಗೆ ತೆರಳಿದರು. ಅವರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.