ಮೈಸೂರು, ಏ.11- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಆಗ್ರಹಿಸಿದ್ದಾರೆ.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಮದಾಸ್ ಕಳಂಕಿತ ವ್ಯಕ್ತಿ. ಹಾಗಾಗಿ ಯಾವುದೇ ಕಾರಣಕ್ಕೂ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿದರು.
ರಾಮದಾಸ್ ಅವರಿಗೆ ಟಿಕೆಟ್ ನೀಡಿದ್ದೇ ಆದರೆ ಈ ಬಾರಿ ನಾವು ಕೆಆರ್ ಕ್ಷೇತ್ರವನ್ನು ಕಳೆದುಕೊಳ್ಳಬೇಕಾಗುತ್ತದೆ. ರಾಮದಾಸ್ ಅವರನ್ನು ಸೋಲಿಸುವುದು ಶತಸಿದ್ಧ. ನಾನು ಬಿಜೆಪಿ ವಕ್ತಾರನಾಗಿ ಮಾತನಾಡುತ್ತಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ. ಈ ನಿರ್ಧಾರವನ್ನು ನಾನು ಕಳೆದ ಅರ್ಧಗಂಟೆ ಹಿಂದೆ ತೆಗೆದುಕೊಂಡಿದ್ದೇನೆ. ಹಾಗಾಗಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಹೇಳುತ್ತಿದ್ದೇನೆ ಎಂದರು.