
ದಾವಣಗೆರೆ, ಏ.11- ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು , 10 ಜನರು ಗಾಯಗೊಂಡಿರುವ ಘಟನೆ ಬಸವ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ ತಾಲ್ಲೂಕು ಚಿರಡೋಣಿ ಗ್ರಾಮದಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಆಸ್ತಿ ವಿಚಾರವಾಗಿ ಜಗಳ ವಿಕೋಪಕ್ಕೆ ತಿರುಗಿದ್ದು ಘರ್ಷಣೆ ಉಂಟಾಗಿದೆ.
ಘರ್ಷಣೆಯಲ್ಲಿ 10 ಮಂದಿ ಸಣ್ಣ ಪುಟ್ಟ ಗಾಯಗೊಂಡಿದ್ದು , ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ಬಸವಪಟ್ಟಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.