ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ , ವಜಾ:

ಮೈಸೂರು, ಏ.11-ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಹಿನಕಲ್ ಬಸವರಾಜು, ಸಂಘಟನಾ ಕಾರ್ಯದರ್ಶಿ ಟಿ.ಎಸ್.ಲೋಕೇಶ್ ತುಂಬಲ, ನಿರ್ದೇಶಕರಾದ ಗುರುಸ್ವಾಮಿ, ಎಸ್.ಚಂದ್ರಶೇಖರ್ ಹಡಜನ ಇವರುಗಳನ್ನು ಮಹಾಸಭಾದಿಂದ ವಜಾಗೊಳಿಸಲಾಗಿದೆ.
ಬಸವರಾಜು ಅವರು ಕಾಂಗ್ರೆಸ್‍ಗೆ ಜಿಲ್ಲಾ ವೀರಶೈವ ಘಟಕ ಸಂಪೂರ್ಣ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಉಳಿದವರು ಸಹಮತ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಎ.ಟಿ.ವಿರೂಪಾಕ್ಷ ಅವರ ನೇತೃತ್ವದಲ್ಲಿ ತುರ್ತು ಸಭೆ ಸೇರಿ ಮಹಾಸಭಾದಿಂದ ವಜಾ ಮಾಡಲಾಗಿದೆ ಎಂದು ಪ್ರಧಾನಕಾರ್ಯದರ್ಶಿ ಶಿವಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ