![k-sureshkumar-it-secretary](http://kannada.vartamitra.com/wp-content/uploads/2018/04/k-sureshkumar-it-secretary-508x381.jpg)
ಬೆಂಗಳೂರು,ಏ.11- ಪ್ರತಿಯೊಬ್ಬರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸರ್ಕಾರಿ ನೌಕರರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬಹುದೆಂದು ಖಜಾನೆ ಜಂಟಿ ನಿರ್ದೇಶಕ ಹೆಚ್.ಎನ್.ಗೋಪಾಲಯ್ಯ ಕಿವಿಮಾತು ಹೇಳಿದರು.
ಬೆಂಗಳೂರು ನಗರ ಜಿಲ್ಲಾ ಖಜಾನೆಯಲ್ಲಿ ನಡೆದ ವಿಶ್ವ ಆರೋಗ್ಯ ದಿನ, ವಿಶ್ವ ಪರಿಸರ ದಿನ, ವಿಶ್ವ ಅರಣ್ಯ ದಿನಾಚರಣೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರವರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆ.ಸುರೇಶ್, ಸಹಾಯಕ ಖಜಾನಾಧಿಕಾರಿ ಮತ್ತು ಕುಮಾರಿ ಉಸ್ನಾ ಪ್ರ.ದ.ಸ. ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ನಿರ್ದೇಶಕರಾದ ಶ್ರೀ ರತ್ನಕುಮಾರಿ, ಸಹಾಯಕ ನಿರ್ದೇಶಕರಾದ ಮಹೇಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.