ಚೆನ್ನೈ, ಏ.11- ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಿನ್ನೆ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆಯಲ್ಲಿ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೆÇಲೀಸರು 21 ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಚೆಪಾಕ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಪಂದ್ಯ ನಡೆಯುತ್ತಿತ್ತು. ಈ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ಗ್ಯಾಲರಿಯಲ್ಲಿದ್ದ ಕೆಲ ಪ್ರೇಕ್ಷಕರು ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಮೈದಾನಕ್ಕೆ ಶೂ ಮತ್ತು ಧ್ವಜಗಳನ್ನು ಎಸೆದರು.
ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ, ಗ್ಯಾಲರಿಯಲ್ಲಿ ಕಿಡಿಗೇಡಿಗಳು ಘೋಷಣೆಗಳನ್ನು ಕೂಗಿ ಪಂದ್ಯಕ್ಕೆ ಅಡ್ಡಿಪಡಿಸಲು ಯತ್ನಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೆÇಲೀಸರು 21 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ನಾಮ್ ತಮಿಳ್ ಕಚ್ಚಿ ಸಂಘಟನೆಯ ಕಾರ್ಯಕರ್ತರು ಎಂದು ತಿಳಿದುಬಂದಿದೆ.