ಕಾಮನ್ ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ: ಕುಸ್ತಿಯಲ್ಲಿ ರಾಹುಲ್ ಅವಾರಿಗೆ ಚಿನ್ನ

ಗೋಲ್ಡ್‌ ಕೋಸ್ಟ್‌‌:ಏ-12: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌‌ನಲ್ಲಿ ಭಾರತ ಮತ್ತೊಂದು ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, 57ಕೆಜಿ ವಿಭಾಗದ ಕುಸ್ತಿಯಲ್ಲಿ ರಾಹುಲ್‌ ಅವಾರಿ ಚಿನ್ನದ ಪದಕಗೆದ್ದಿದ್ದಾರೆ.

ಕೆನಡಾ ಕುಸ್ತಿಪಟುವಿನ ವಿರುದ್ಧ ರಾಹುಲ್‌ 15-7 ಅಂತರದ ಗೆಲುವು ದಾಖಲಿಸಿ ಚಿನ್ನಕ್ಕೆ ಕೊರಳೊಡಿದ್ದಾರೆ.

ಇನ್ನು 53 ಕೆಜಿ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಬಬಿತಾ ಕುಮಾರಿ ಬೆಳ್ಳಿ ಗೆದ್ದಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಜಯ ಸಾಧಿಸಿ ಫೈನಲ್‌ ಪ್ರವೇಶ ಪಡೆದುಕೊಂಡಿದ್ದ ಬಬಿತಾ ಕುಮಾರಿ ಫೈನಲ್‌ನಲ್ಲಿ ಮುಗ್ಗರಿಸಿದ್ದರಿಂದ ಬೆಳ್ಳಿಗೆ ತೃಪ್ತಿ ಪಡುವಂತಾಯಿತು.

ಬಲಿತಾ ವಿರುದ್ಧ ಕಣಕ್ಕಿಳಿದಿದ್ದ ಕೆನಡಾ ಆಟಗಾರ್ತಿ 0-1 ಅಂತರದಿಂದ ಗೆಲುವು ದಾಖಲಿಸಿ ಸ್ವರ್ಣ ಪದಕಕ್ಕೆ ಮುತ್ತಿಕ್ಕಿದರು. ಇನ್ನು 76 ಕೆಜಿ ಕುಸ್ತಿ ವಿಭಾಗದಲ್ಲಿ ಭಾರತದ ಕಿರಣ್ ಕಂಚಿನ ಪದಕ ಗೆಲುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ