ಬೆಂಗಳೂರು:ಏ-೧೨: ಸಂಸತ್ ಬಜೆಟ್ ಅಧಿವೇಶನ ಪ್ರತಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದನ್ನು ಖಂಡಿಸಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಸಂಸದರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಬಿಜೆಪಿ ಸಂಸದರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದಗೌಡ, ಪ್ರಕಾಶ್ ಜಾವಡೇಕರ್, ಮುರಳೀಧರ ರಾವ್ ಸಂಸದ ಪಿ.ಸಿ. ಮೋಹನ್ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸತ್ಯಾಗ್ರಹ ನಡೆಯುತ್ತಿದೆ.
ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಂಸದ ಸುರೇಶ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ದಾವಣಗೆರೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಪ್ರಧಾನಿ ಮೋದಿ ಅವರು ಉಪವಾಸ ಸತ್ಯಾಗ್ರಹದ ನಡುವೆಯೇ ತಮ್ಮ ದೈನಿಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿಡ್ಡು, ತಮಿಳುನಾಡಿನ ಮಹಾಬಲೇಶ್ವರದಲ್ಲಿ ನಡೆಯುತ್ತಿರುವ ಡಿಫೆನ್ಸ್ ಎಕ್ಸ್ಪೋದಲ್ಲಿ ಪಾಲ್ಗೊಂಡಿದ್ದಾರೆ.