ಬೆಂಗಳೂರು,ಏ.12
ರಾಜ್ಯದಲ್ಲಿ ಏ.18 ಮತ್ತು 19ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಿಇಟಿ ನಡೆಯಲಿದ್ದು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪ್ರಕಟಿಸಿದೆ.
ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು. ಸಿಇಟಿ 2018ಕ್ಕೆ ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಮಾರ್ಗದರ್ಶನಗಳನ್ನು ತಪ್ಪದೆ ಅನುಸರಿಸಲು ಸೂಚಿಸಲಾಗಿದೆ. ಈಗಾಗಲೇ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಆಗದಿದ್ದಲ್ಲಿ ಶುಲ್ಕ ಪಾವತಿಸಿದ ದೃಢೀಕರಣದೊಂದಿಗೆ ಇಮೇಲ್ (keauthority-ka@nic.in) ಅಥವಾ ಸಹಾಯವಾಣಿ (080-23460460) ಮುಖಾಂತರ ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ವೇಳಾಪಟ್ಟಿ: ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಾರ ಏ.18ರಂದು ಬೆಳಗ್ಗೆ 10.30 ರಿಂದ 11.50ರವರೆಗೆ 60 ಅಂಕದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ 60 ಅಂಕದ ಗಣೀತ ಪರೀಕ್ಷೆ ನಡೆಯಲಿದೆ. ಏ.19ರಂದು ಬೆಳಗ್ಗೆ 10.30 ರಿಂದ 11.50ರವರೆಗೆ 60 ಅಂಕದ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ 60 ಅಂಕದ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.