ರಾಜಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಐವರು ಮಕ್ಕಳೂ ಸೇರಿದಂತೆ ಕನಿಷ್ಠ 12 ಮಂದಿ ಮೃತ:

ಜೈಪುರ್, ಏ.12- ರಾಜಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಐವರು ಮಕ್ಕಳೂ ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ.
ಮರುಭೂಮಿ ರಾಜ್ಯದ ದೋಲ್ಪುರದಲ್ಲಿ ಏಳು ಮಂದಿ ಹಾಗೂ ಭರತ್‍ಪುರದಲ್ಲಿ ಐವರು ಸಾವಿಗೀಡಾಗಿದ್ದಾರೆ. ಮನೆ ಕುಸಿತಗಳಿಂದ ಈ ದುರಂತಗಳು ಸಂಭವಿಸಿವೆ.
ಧಾರಾಕಾರ ಮಳೆಯಿಂದಾಗಿ ಈ ಪ್ರದೇಶಗಳಲ್ಲಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಹಲವು ಮನೆಗಳು ಜಲಾವೃತವಾಗಿವೆ. ಮೃತರ ಕುಟುಂಬಗಳಿಗೆ ಜಿಲ್ಲಾ ಕಲೆಕ್ಟರ್ ತಲಾ 50 ಸಾವಿರ ರೂ.ಗಳ ಪರಿಹಾರ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ