ಬೆಂಗಳೂರು,ಏ.12- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇಕಾರರ ಸಮುದಾಯದ ನಾಲ್ಕು ಅಭ್ಯರ್ಥಿಗಳಿಗೆ ಟಿಕೆಟ್ ನೀಡದಿದ್ದರೆ ಮತದಾನವನ್ನು ಬಹಿಷ್ಕರಿಸುವುದಾಗಿ ನೇಕಾರರ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಲಿಂಗರಾಜು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇ 12ರಂದು ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ . ಈಗಾಗಲೇ ಬಿಡುಗಡೆ ಮಾಡಿರುವ ಮೊದಲನೇ ಪಟ್ಟಿಯಲ್ಲಿ ಸಮುದಾಯದ ಮುಖಂಡರಿಗೆ ಯಾವುದೇ ಆದ್ಯತೆ ನೀಡಿಲ್ಲ ಎಂದು ದೂರಿದರು.
ಬೆಂಗಳೂರಿನಲ್ಲಿ ಸುಮಾರು 7ರಿಂದ 8 ಲಕ್ಷ ನೇಕಾರರು ಇದ್ದಾರೆ. ನೇಕಾರರ ಸಮುದಾಯಕ್ಕೆ ಟಿಕೆಟ್ ನೀಡದೆ ಕುತಂತ್ರ ರಾಜಕಾರಣ ಮಾಡುತ್ತಿರುವ ಬಿಜೆಪಿ ತನ್ನ ತಪ್ಪನ್ನು ಸರಿಪಡಿಸಿಕೊಂಡು ಸ್ಪರ್ಧಿಸಲು ಆಕಾಂಕ್ಷಿಗಳಾದ ಗಾಂಧಿನಗರ ಕ್ಷೇತ್ರದ ಎ.ಎಲ್.ಶಿವಕುಮಾರ್, ಮಹಾಲಕ್ಷ್ಮಿಪುರ ಕ್ಷೇತ್ರದಿಂದ ಎಸ್.ಹರೀಶ್, ಶಿವಾಜಿನಗರದಿಂದ ಎಂ.ಗೋಪಿ, ಚಾಮರಾಜಪೇಟೆಯಿಂದ ಬಿ.ವಿ.ಗಣೇಶ್ ಇವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಲಾಗಿದೆ.
ಒಂದು ವೇಳೆ ಟಿಕೆಟ್ ನೀಡದೆ ಇದ್ದರೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದ ಅವರು, ಈಗಾಗಲೇ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಲ್ಲಿ ಸಮುದಾಯದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇª ಎಂದು ಹೇಳಿದರು.