ನವದೆಹಲಿ:ಏ-12: ಸಂಸತ್ ಸುಗಮ ಕಲಾಪ ನಡೆಸಲು ವಿಪಕ್ಷಗಳು ಅಡ್ಡಿಪಡಿಸ್ದ್ದು ಮಾತ್ರವಲ್ಲದೆ ಸರ್ಕಾರದ ವಿರುದ್ಧ ಕೆಲ ವರ್ಗದ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಬಿಜೆಪಿ ಸಂಸದರು ಇಂದಿನಿಂದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಥ್ ನೀಡಿದ್ದಾರೆ.
23 ದಿನಗಳ ಸಂಸತ್ ಕಲಾಪ ಸಂಪೂರ್ಣ ವ್ಯರ್ಥವಾಗಲು ಕಾರಣವಾದ ಪ್ರತಿಪಕ್ಷಗಳ ವಿರುದ್ಧ ಬಿಜೆಪಿ ಸಂಸದರು ನಡೆಸಲ್ಲ್ಲುದ್ದೇಶಿಸಿರು ಉಪವಾಸದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಅವರು ಗುರುವಾರ ಒಂದು ದಿನ ಉಪವಾಸ ನಡೆಸಲಿದ್ದಾರೆ. ಪ್ರಧಾನಿ ಯವರ ಗಾಂಧಿ ತತ್ವದ ಹೋರಾಟಕ್ಕೆ ಕೇಂದ್ರ ಸಚಿವರು ಮತ್ತು ಸಂಸದರು ಸಾಥ್ ನೀಡಿದ್ದು ಅವರವರ ಕ್ಷೇತ್ರಗಳಲ್ಲಿ ಉಪವಾಸ ನಿರತರಾಗಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಪ್ರಧಾನಿ ಮೋದಿ ಬಜೆಟ್ ಅಧಿವೇಶನದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದವರ ವಿರುದ್ಧ ಸತ್ಯಾಗ್ರಹ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಸಧ್ಯ ಪ್ರಧಾನಿ ಮೋದಿ ತಮಿಳುನಾಡು ಪ್ರವಾಸದಲ್ಲಿದ್ದಾರೆ.
ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹುಬ್ಬಳ್ಳಿ ಪ್ರವಾಸದಲ್ಲಿದ್ದು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಅವರು ಪಾಲ್ಗೊಳ್ಳಲಿದ್ದು, ಸಂಸದ ಪ್ರಹ್ಲಾದ್ ಜೋಷಿ ಅವರು ಜೊತೆಯಲ್ಲಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತ್ ಕುಮಾರ್ ಮತ್ತು ಸಂಸದ ಪಿ.ಸಿ.ಮೋಹನ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜೊತೆಯಲ್ಲಿ ಕುಳಿತಿದ್ದಾರೆ. ರಾಜ್ಯದ ಇತರ ಬಿಜೆಪಿ ಸಂಸದರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಯಾವುದೇ ಕಾರಣಕ್ಕೂ ಉಪವಾಸ ನಿರತ ಸಂಸದರು, ಸಚಿವರು ಆಹಾರ ಸೇವಿಸಲು ಮುಂದಾಗಬಾರದು ಎಂದು ಬಿಜೆಪಿ ಕಟ್ಟಪ್ಪಣೆ ಹೊರಡಿಸಿದೆ.
Parliament impasse,PM Modi,BJP MP,observe fasts protest