ಸಿದ್ದರಾಮ್ಯನವರೇ ಮುಂದಿನ ಮುಖ್ಯಮಂತ್ರಿ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಘೋಶಣೆ, ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕಿದೆ: ಕಾಂಗ್ರೆಸ್ ವಿರುದ್ದ ಮತ ಚಲಾಯಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

ಬೆಂಗಳೂರು,ಏ.12- ಸಿದ್ದರಾಮ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿರುವುದು ದಲಿತರೊಬ್ಬರು ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿದೆ. ಆದ್ದರಿಂದ ದಲಿತರು ಕಾಂಗ್ರೆಸ್ ವಿರುದ್ದ ಮತ ಚಲಾಯಿಸಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಡಾ.ಎನ್.ವೆಂಕಟಸ್ವಾಮಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿಂದು ಈ ಕುರಿತು ಮಾತನಾಡಿದ ಅವರು, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಲಾಗದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಡೀ ರಾಜ್ಯದ ದಲಿತ ಜನಾಂಗ ಸೇಡು ತೀರಿಸಿಕೊಳ್ಳಲು ಚುನಾವಣೆಯ ದಿನಾಂಕವನ್ನು ಕಾಯುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ನಾಡಿನ ಎಲ್ಲ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ದಲಿತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಹಾಗಾಗಿ ದಲಿತರು ಈ ಪಕ್ಷಕ್ಕೆ ಮತ ಹಾಕಬಾರದು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರದಂತೆ ಮಾಡಲು ಹೆಚ್ಚಿನ ಕ್ಷೇತ್ರಗಳಲ್ಲಿ ನಮ್ಮ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಹೇಳಿದರು.
ಪ್ರತಿ ಜಿಲ್ಲೆಯು ಐದರಿಂದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ 70 ಅಭ್ಯರ್ಥಿಗಳ ಪಟ್ಟಿಯನ್ನು ವೆಂಕಟಸ್ವಾಮಿ ಬಿಡುಗಡೆ ಮಾಡಿದರು. ಏ.19ರಂದು 2ನೇ ಪಟ್ಟಿ ಹಾಗೂ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ