ಚುನಾವಣೆಗೂ ಮುನ್ನವೇ ರಾಜ್ಯದ ಜನತೆ ಬಿಜೆಪಿಗೆ ಗೆಲುವಿನ ಸಂದೇಶ ನೀಡಿದ್ದಾರೆ; ಬಿಜೆಪಿ ಅಧ್ಯಕ್ಷ ಅಮಿತ್ ಶಾ

ಬೆಳಗಾವಿ: ಏ- 13 : ಎರಡು ದಿನಗಳ ಉತ್ತರ ಕರ್ನಾಟಕ್ ಪ್ರವಾಸದಲ್ಲಿ ನಿರತರಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಚುನಾವಣಾ ಪ್ರಚಾರ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಷಾ, ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಜಂಬದಿಂದ ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಹೆದರಿ ಈಗ ಕ್ಷೇತ್ರ ಬದಲಿಸಲು ಚಿಂತನೆ ನಡೆಸಿ ಬೇರೊಂದು ಕ್ಷೇತ್ರ ಹುಡುಕಾಡುತ್ತಿದ್ದಾರೆ ಎಂದು ಹೇಳಿದರು.

ಕಿತ್ತೂರಿನ ಚನ್ನಮ್ಮಳ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಮೀಸೆ ತಿರುವಿ ಚಾಮುಂಡಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಜಂಬದಿಂದ ಹೇಳುತ್ತಿದ್ದ ಸಿದ್ದರಾಮಯ್ಯಗೆ ಆ ಕ್ಷೇತ್ರದ ಜನರ ಆಕ್ರೋಶಕ್ಕೆ ಹೆದರಿ ಕ್ಷೇತ್ರ ಹುಡುಕಾಡುತ್ತಿದ್ದಾರೆ‌ ಎಂದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ಸರಕಾರದ ಮೇಲೆ ರಾಜ್ಯದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಾನು ಪ್ರವಾಸ ಮಾಡಿದ ಕಡೆಗಳಲ್ಲಿ ಸಿದ್ದರಾಮಯ್ಯನವರ ಬಗ್ಗೆ ಆಕ್ರೋಶವ್ಯಕ್ತಪಡಿಸಿರುವ ಜನತೆ ಯಡಿಯೂರಪ್ಪನವರ ಮೇಲೆ ಪ್ರೀತಿ ತೋರುತ್ತಿದ್ದಾರೆ ಎಂದರು.

ಚುನಾವಣೆಯ ಮುನ್ನವೇ ರಾಜ್ಯದ ಜನತೆ ಬಿಜೆಪಿಗೆ ಗೆಲುವಿಗೆ ಸಂದೇಶ ನೀಡುತ್ತಿದ್ದಾರೆ. ಈ ಸಲ ಪ್ರಚಂಡ ಬಹುಮತದಿಂದ ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪನವರ ಸಮ್ಮುಖದಲ್ಲಿ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯಲಾಗುವುದು ಎಂದರು.

Assembly election,BJP,Uttara karnataka,Belagam,Amith sha

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ