ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ ಮತ್ತು ವಿಶೇಷ ಪರಣಿತಿ ಚಿತ್ರಕಲೆಯ ಪರೀಕ್ಷೆಗಳನ್ನು 10 ದಿನದೊಳಗೆ ನಡೆಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು,ಏ.13-ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ ಮತ್ತು ವಿಶೇಷ ಪರಣಿತಿ ಚಿತ್ರಕಲೆಯ ಪರೀಕ್ಷೆಗಳನ್ನು 10 ದಿನದೊಳಗೆ ನಡೆಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗತ್ತದೆ ಎಂದು ಯುವ ಜಾಲ ಜಾಗೃತಿ ಪರಿಷತ್ ಎಚ್ಚರಿಸಿದೆ.

ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಣ ಬಿಡುಗಡೆ ಮಾಡಿಲ್ಲ ಎಂಬ ಕಾರಣಕ್ಕಾಗಿ 2017-18ನೇ ಸಾಲಿನ ಪರೀಕ್ಷೆಯನ್ನು ತಡೆ ಹಿಡಿಯುವುದರಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಅತಂತ್ರಕ್ಕೆ ಸಿಲುಕಿದೆ ಎಂದು ಯುವಬಲ ಜಾಗೃತಿ ಪರಿಷತ್ ಅಧ್ಯಕ್ಷ ಪ್ರಾಚೀಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಎರಡು ಸರ್ಕಾರಿ ಮಹಾವಿದ್ಯಾಲಯಗಳು 24 ಅನುದಾನಿತ ಮಹಾವಿದ್ಯಾಲಯಗಳು, 49 ಅನುದಾನಿತ ಮಹಾವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 3,500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅಡಕತ್ತರಿಗೆ ಸಿಲುಕಿದೆ.

ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಎಂಬ ಕಾರಣಕ್ಕಾಗಿ ಪರೀಕ್ಷೆಯನ್ನು ತಡೆಹಿಡಿಯಲಾಗಿದೆ. ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ಕುಲಪತಿ ಹಾಗೂ ಕುಲಸಚಿವರುಗಳನ್ನು ಭೇಟಿ ಮಾಡಿ ಪರೀಕ್ಷೆ ನಡೆಸುವಂತೆ ಒತ್ತಾಯ ಮಾಡಲಾಗಿತ್ತು. ಆದರೆ ಈವರೆಗೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿ ಎಂದು ಅವರು ವಿಷಾದಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಹಾಗೂ ವಿವಿಯ ಉಪಕುಲಪತಿಗಳು ಮಾತುಕತೆ ನಡೆಸಿ ಪರೀಕ್ಷೆ ನಡೆಸಲು ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಚುನಾವಣೆಯನ್ನು ಬಹಿಷ್ಕರಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ