ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ

ಬೆಂಗಳೂರು, ಏ.13- ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಾಯಂಡಹಳ್ಳಿ ನಿವಾಸಿ ರಾಹುಲ್ (19) ಕೊಲೆಯಾದ ದುರ್ದೈವಿ.
ಮಲ್ಲತ್ತಹಳ್ಳಿಯಲ್ಲಿರುವ ಚಿತ್ರಮಂದಿರವೊಂದರಲ್ಲಿ ರಾಹುಲ್ ಕೆಲಸ ಮಾಡುತ್ತಿದ್ದು, ರಾತ್ರಿ ಕೆಲಸ ಮುಗಿಸಿಕೊಂಡು 12 ಗಂಟೆಯಲ್ಲಿ ಮನೆಗೆ ಹೋಗುತ್ತಿದ್ದನು.

ನಾಯಂಡಹಳ್ಳಿ-ಮೆಟ್ರೋ ನಿಲ್ದಾಣದ ಬಳಿ ದುಷ್ಕರ್ಮಿಗಳು ರಾಹುಲ್‍ನನ್ನು ಅಡ್ಡಗಟ್ಟಿ ಹೊಟ್ಟೆ ಮತ್ತು ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಈತನನ್ನು ಯಾರು, ಏತಕ್ಕಾಗಿ ಕೊಲೆ ಮಾಡಿದ್ದಾರೆಂಬುದು ತಿಳಿದುಬಂದಿಲ್ಲ. ಹಣ ಮತ್ತು ಮೊಬೈಲ್ ದರೋಡೆಗೆ ಬಂದ ದುಷ್ಕರ್ಮಿಗಳು ಈತನನ್ನು ಕೊಲೆ ಮಾಡಿದ್ದಾರೆಯೇ ಅಥವಾ ಹಳೆ ದ್ವೇಷದಿಂದ ಕೊಲೆ ನಡೆದಿದೆಯೇ ಎಂಬ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.
ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ