ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಚುನಾವಣಾ ಪ್ರಚಾರ ಆರಂಭ:

ಹಾಸನ, ಏ.13- ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ರೇವಣ್ಣ ಅವರು ನಾಳೆ ಬೆಳಗ್ಗೆ 8 ಗಂಟೆಗೆ ಮೂಡಲಹಿಪ್ಪೆ ಗ್ರಾಮದಿಂದ ವಿಶೇಷ ವಾಹನದ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.
ಇವರ ಜತೆ ಪತ್ನಿ ಭವಾನಿ ರೇವಣ್ಣ, ಪುತ್ರ ಡಾ.ಸೂರಜ್ ರೇವಣ್ಣ, ಪ್ರಜ್ವಲ್ ರೇವಣ್ಣ, ಮುಖಂಡರು ಹಾಗೂ ಅಪಾರ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 11.30ಕ್ಕೆ ಹೊಳೆನರಸೀಪುರದ ಚನ್ನಾಂಬಿಕಾ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಹಾಗೂ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಂಡಿಗನಹಳ್ಳಿ ಹೋಬಳಿಯಲ್ಲಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ