ನವದೆಹಲಿ, ಏ.13- ದೇಶದ ವಿವಿಧ ರಾಜ್ಯಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಇಂಥ ಕೃತ್ಯಗಳನ್ನು ಎಸಗುವ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಗಂಭೀರ ಚಿಂತನೆ ನಡೆಸಿದೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಇಂಥ ಪ್ರಕರಣಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆ(ಪೆÇೀಕ್ಸೊ)ಗೆ ತಿದ್ದುಪಡಿ ತರಲು ಅವರು ಗಂಭೀರ ಚಿಂತನೆ ನಡೆಸಿದ್ದು, ಈ ಸಂಬಂಧ ಸೋಮವಾರ ಸಂಪುಟ ಟಿಪ್ಪಣಿಯೊಂದನ್ನು ಹೊರಡಿಸುವುದಾಗಿ ಹೇಳಿದ್ದಾರೆ.
ಕತುವಾ ಮತ್ತು ಉನ್ನಾವೋ ಗ್ಯಾಂಗ್ ರೇಪ್ ಅತ್ಯಾಚಾರ ಪ್ರಕರಣಗಳು ರಾಷ್ಟ್ರಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಸಚಿವರು ನೀಡಿರುವ ಈ ಹೇಳಿಕೆ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ಅಸಿಫಾ ಬಾನೊ ಎಂಬ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಗ್ಗೆ ವೀಡಿಯೋ ಸಂದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಚವೆ ಮೇನಕಾ ಗಾಂಧಿ, ಈ ಘಟನೆಯಿಂದ ತಾವು ತುಂಬಾ ವಿಚಲಿತವಾಗಿರುವುದಾಗಿ ಮಮ್ಮಲ ಮರುಗಿದ್ದಾರೆ.
ತಮ್ಮ ಸಚಿವಾಲಯವು ಕತುವಾ, ಉನ್ನಾವೊ ಮತ್ತು ಇತ್ತೀಚಿನ ಇಂಥ ಎಲ್ಲ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪೆÇೀಕ್ಸೊ ಕಾಯ್ದೆಗೆ ತಿದ್ದುಪಡಿಗಳನ್ನು ಮಾಡಿ, 12 ವರ್ಷಗಳ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲಾಗುವುದು. ಈ ಸಂಬಂಧ ಏ.16ರಂದು ಸಂಪುಟ ಟಿಪ್ಪಣಿ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ನೇಣು ಶಿಕ್ಷೆ ವಿಧಿಸುವ ಕಾನೂನು ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ಜಾರಿಗೊಳಿಸಲಾಗಿದೆ. ಇದು ರಾಷ್ಟ್ರಮಟ್ಟದಲ್ಲೂ ಜಾರಿಗೊಳಿಸುವ ಬಗ್ಗೆ ಈಗ ಗಂಭೀರ ಚಿಂತನೆ ನಡೆಸಲಾಗಿದ್ದು, ಕಾಮುಕರಿಗೆ ಭಯ ಮತ್ತು ಎಚ್ಚರಿಕೆಯ ಸಂದೇಶ ರವಾನಿಸಲು ಕೇಂದ್ರ ಸರ್ಕಾರ ಸಜ್ಜಾಗಿವೆ.
ದೇಶಾದ್ಯಂತ ಪ್ರತಿಭಟನೆ : ಕತುವಾ ಮತ್ತು ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಬಗ್ಗೆ ದೇಶ ವಿವಿಧ ರಾಜ್ಯಗಳಲ್ಲಿ ನಿನ್ನೆಯಿಂದ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ಮಧ್ಯರಾತ್ರಿ ದೆಹಲಿಯ ಇಂಡಿಯಾ ಗೇಟ್ ಬಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಮೊಂಬತ್ತಿ ಪ್ರತಿಭಟನೆ ನಡೆಯಿತು.
ದೇಶವನ್ನು ಬೆಚ್ಚಿ ಬೀಳಿಸಿದ ಕತವಾ ಪ್ರಕರಣ:
ಜಮ್ಮುವಿನ ಕಠುವಾ ಜಿಲ್ಲೆಯ ರಸ್ಸಾನಾದಲ್ಲಿ ನೆಲೆಸಿದ್ದ ಬಕ್ರೆವಾಲಾ ಅಲೆಮಾರಿ ಜನರನ್ನು ಅಲ್ಲಿಂದ ಬೆದರಿಸಿ ಓಡಿಸುವ ಸಲುವಾಗಿ ಆ ಸಮುದಾಯಕ್ಕೆ ಸೇರಿದ 8 ವರ್ಷದ ಬಾಲಕಿ ಅಸೀಫಾ ಭಾನು ಮೇಲೆ ಸ್ಥಳೀಯ ಗುಂಪು ಅತ್ಯಾಚಾರ ನಡೆಸಿ, ಆಕೆಯನ್ನು ಕೊಂದಿದೆ ಎಂದು ಜಮ್ಮು-ಕಾಶ್ಮೀರದ ಅಪರಾಧ ವಿಭಾಗದ ಪೆÇಲೀಸರು ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಗಳು ಬಾಲಕಿಗೆ ನೀಡಿದ್ದ ಹಿಂಸೆಯ ವಿವರಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಮುಸ್ಲಿಮರಾದ ಬಕ್ರೆವಾಲಾಗಳನ್ನು ಹೆದರಿಸುವುದು ಪ್ರಮುಖ ಆರೋಪಿ ಸಾಂಜಿ ರಾಮನ ಉದ್ದೇಶವಾಗಿತ್ತು. ಹೀಗಾಗಿ ಆ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲು ಸಾಂಜಿ ಸಂಚು ರೂಪಿಸಿದ್ದ. ಇದಕ್ಕಾಗಿ ಆತ ತನ್ನ ಮೂವರು ಸ್ನೇಹಿತರು, ಇಬ್ಬರು ಪೆÇಲೀಸ್ ಅಧಿಕಾರಿಗಳು ಮತ್ತು ತನ್ನ ಸೋದರಳಿಯನ ನೆರವು ಕೋರಿದ್ದ. ರಸ್ಸಾನಾ ಬಳಿಯ ಹುಲ್ಲುಗಾವಲಿನಲ್ಲಿ ಕುದುರೆಯನ್ನು ಮೇಯಿಸುತ್ತಿದ್ದ ಬಾಲಕಿಯನ್ನು, ಆತನ ಸೋದರಳಿಯ ಜ.10ರಂದು ಸಮೀಪದ ಕಾಡಿಗೆ ಕರೆ ತಂದಿದ್ದ. ಅಲ್ಲಿ ಆಕೆಗೆ ಬಲವಂತದಿಂದ ನಿದ್ದೆಯ ಮಾತ್ರೆ ನುಂಗಿಸಿದ್ದ. ನಂತರ ಆಕೆಯನ್ನು ಊರಿನ ದೇವಸ್ಥಾನವೊಂದಕ್ಕೆ ಕರೆದುಕೊಂಡು ಹೋಗಿ ಕೂಡಿ ಹಾಕಲಾಗಿತ್ತು ಎಂದು ತನಿಖಾಧಿಕಾರಿಗಳು ವಿವರಿಸಿದ್ದಾರೆ.
ಅಲ್ಲಿ ಆಕೆಯ ಮೇಲೆ ಏಳೂ ಆರೋಪಿಗಳು ನಾಲ್ಕು ದಿನ ಸತತ ಅತ್ಯಾಚಾರ ನಡೆಸಿದ್ದರು. ಬಾಲಕಿ ಮೇಲೆ ಅತ್ಯಾಚಾರ ನಡೆಸುವುದಿದ್ದರೆ ಬಾ ಎಂದು ಸಾಂಜಿ ಸೋದರಳಿಯ, ಸಾಂಜಿಯ ಮಗನನ್ನು ಮೀರತ್ನಿಂದ ಕರೆಸಿಕೊಂಡಿದ್ದ. ನಿತ್ರಾಣವಾಗಿದ್ದ ಆಕೆಯನ್ನು ಕೊಲ್ಲಲು ಸಾಂಜಿಯ ಸೋದರಳಿಯ ಮುಂದಾದಾಗ, ಮತ್ತೊಬ್ಬ ಅರೋಪಿ ಪೆÇಲೀಸ್ ಕಾನ್ಸ್ಟೆಬಲ್ ನಾನು ಕೊನೆಯ ಬಾರಿ ಅತ್ಯಾಚಾರ ನಡೆಸುತ್ತೇನೆ ಎಂದು ಕೃತ್ಯವೆಸಗಿದ್ದ. ಅನಂತರ ಕತ್ತು ಹಿಸುಕಿ ಆಕೆಯನ್ನು ಕೊಲ್ಲಲಾಗಿತ್ತು ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿ ಸಾಂಜಿಯ ಪರವಾಗಿ ಜಮ್ಮು-ಕಾಶ್ಮೀರದ ಬಿಜೆಪಿಯ ಕೆಲವು ನಾಯಕರು ಪ್ರತಿಭಟನೆ ನಡೆಸಿದ್ದಾರೆ. ತನಿಖಾ ತಂಡದಲ್ಲಿ ಮುಸ್ಲಿಮರಿದ್ದಾರೆ. ಅವರು ಮುಗ್ಧ ಹಿಂದೂಗಳ ಮೇಲೆ ಆರೋಪ ಹೊರೆಸಿ, ಬಂಧಿಸಿದ್ದಾರೆ. ಪ್ರಕರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ವಹಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
ಸಚಿವರ ಪ್ರತಿಕ್ರಿಯೆ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಾವೆಲ್ಲರೂ ಮನುಷ್ಯರಾಗಿ ವಿಫಲರಾಗಿದ್ದೇವೆ. ಆದರೆ, ಆಕೆಗೆ ನ್ಯಾಯ ಒದಗಿಸೋಣ ಎಂದು ವಿದೇಶಾಂಗ ವ್ಯಹಾರಗಳ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.