ಕೋಲಾರ, ಏ.13- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಬೇತಮಂಗಲ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೆಜಿಎಫ್ ಎಸ್ಪಿ ಬಿ.ಎಸ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿದ ಅವರು, ಪರವಾನಗಿ ಪಡೆಯದೆ ಎಂಇಪಿ ಪಕ್ಷದ ಕಾರ್ಯಕರ್ತರು ಪ್ರಚಾರಕ್ಕಾಗಿ ಬಳಸುತ್ತಿದ್ದ ವಾಹನ, ಅಂಗನವಾಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಭೋಜನದ ವೇಳೆ ಪಾತ್ರೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕ್ಯಾಸಂಬಳ್ಳಿಯಲ್ಲಿ ಅನುಮತಿ ಪಡೆಯದೆ ಭೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಗುತ್ತಿದ್ದು, ಈ ವಿರುದ್ಧವೂ ದೂರು ದಾಖಲಿಸಲಾಗಿದೆ ಎಂದು ಲೋಕೇಶ್‍ಕುಮಾರ್ ತಿಳಿಸಿದ್ದಾರೆ.