
ಬೆಂಗಳೂರು,ಏ.14-ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಯೊಬ್ಬರಿಗೆ ದುಬೈನಿಂದ ಕೆಲವರು ವಾಟ್ಸಪ್ ಮುಖಾಂತರ ಬೆದರಿಕೆ ಸಂದೇಶ ರವಾನಿಸಿರುವ ಘಟನೆ ವರದಿಯಾಗಿದೆ.
ಈ ಬಗ್ಗೆ ಪಣೀಂದ್ರ ಅವರು ಸೈಬರ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದುಬೈ ಮೂಲದ ಮೊಬೈಲ್ ಸಂಖ್ಯೆಯಿಂದ ವಾಟ್ಸಪ್ಗೆ ಕೊಲೆ ಮಾಡುವುದಾಗಿ ಬೆದರಿಕೆ ಸಂದೇಶ ಬಂದಿದೆ.
ದೂರವಾಣಿ ಸಂಖ್ಯೆಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಯಾವ ಕಾರಣಕ್ಕೆ ಇವರಿಗೆ ಬೆದರಿಕೆ ಕರೆ ಬಂದಿದೆ ಎಂಬುದು ತಿಳಿದುಬಂದಿಲ್ಲ