ವಿಧಾನಸಭೆ ಚುನಾವಣೆ: 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲು: ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್

ಬೆಂಗಳೂರು, ಏ.14- ವಿಧಾನಸಭೆ ಚುನಾವಣೆ ಸಂಬಂಧ ಈವರೆಗೂ 15 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅತಿ ಹೆಚ್ಚು ಪ್ರಕರಣಗಳು ಅನಧಿಕೃತ ಹಣ ಸಾಗಾಣಿಕೆಗೆ ಸಂಬಂಧಪಟ್ಟಂತೆ ದಾಖಲಾಗಿವೆ. ಅನಧಿಕೃತ ಹಣ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಚೆಕ್ಪೋಸ್ಟ್ ನಲ್ಲಿ ಹಾಗೂ ಗಸ್ತು ತಿರುಗುವ ಪೊಲೀಸರು ತಪಾಸಣೆ ಮಾಡುತ್ತಾರೆ. ಈ ರೀತಿ ಸಿಕ್ಕಿಬಿದ್ದ ಆರೋಪಿಗಳನ್ನು ಹಣ ಸಮೇತ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಸಮಿತಿಯ ಮುಂದೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಸಾಗಾಣಿಕೆಯಾಗುತ್ತಿದ್ದ ಹಣದ ಬಗ್ಗೆ ತನಿಖೆ ನಡೆದು ಸೂಕ್ತ ದಾಖಲೆಗಳಿಲ್ಲದಿದ್ದರೆ ಕ್ರಮ ಜರುಗಿಸಲಾಗುವುದು. 10 ಲಕ್ಷಕ್ಕಿಂತ ಮೇಲ್ಪಟ್ಟ ಹಣವಿದ್ದರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ