ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ಅಭ್ಯರ್ಥಿ ಜಿ.ಟಿ.ದೇವೇಗೌಡ ಹರಸಾಹಸ

ಮೈಸೂರು, ಏ.14-ಜೆಡಿಎಸ್‍ನ ಭದ್ರ ಕೋಟೆಯಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ಅಭ್ಯರ್ಥಿ ಜಿ.ಟಿ.ದೇವೇಗೌಡ ಹಾಗೂ ಮುಖಂಡರು ಹರಸಾಹಸ ಪಡುತ್ತಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಚಾಮುಂಡೇಶ್ವರಿ ಕ್ಷೇತ್ರಾದ್ಯಂತ ಮೂರು ದಿನಗಳ ಕಾಲ ಜಿಟಿಡಿ ಪರ ಮತಬೇಟೆಗೆ ಟೊಂಕ ಕಟ್ಟಿ ನಿಂತಿದ್ದಾರೆ.
ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯವಿರುವ ಗ್ರಾಮಗಳಿಗೆ ಭೇಟಿ ನಿಡಿ ಮತಯಾಚಿಸಲಿದ್ದಾರೆ. ನಂತರ ಕ್ಷೇತ್ರದ ಇತರೆ ಗ್ರಾಮಗಳಿಗೂ ಭೇಟಿ ನೀಡಿ ಜನರಲ್ಲಿ ಜೆಡಿಎಸ್ ಆಡಳಿತವಿದ್ದಾಗಿನ ಅಭಿವೃದ್ಧಿ ಕಾರ್ಯಗಳನ್ನು ಮನದಟ್ಟು ಮಾಡಿಕೊಡಲಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ಬಾರಿ ಕ್ಷೇತ್ರಾದ್ಯಂತ ಪ್ರಚಾರ ನಡೆಸಿ ತಮ್ಮ ಪರ ಮತಯಾಚಿಸಿ ಹೋಗಿದ್ದಾರೆ.
ಇದಕ್ಕೆ ಪ್ರತಿತಂತ್ರವಾಗಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡರ ಪರ ಮತಪ್ರಚಾರದಲ್ಲಿ ತೊಡಗಿಕೊಂಡರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪರ್ಧಿಸುತ್ತಿರುವುದರಿಂದ ಹೈವೋಲ್ಟೇಜ್ ಇದ್ದು ಕಾಂಗ್ರೆಸ್-ಜೆಡಿಎಸ್ ಇಬ್ಬರಿಗೂ ಪ್ರತಿಷ್ಠೆಯಾಗಿದೆ. ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ತಂತ್ರ-ಪ್ರತಿತಂತ್ರಗಳು ನಡೆದಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ