ಚುನಾವಣೆಗಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಸಕಲ ಸಿದ್ಧತೆ

ದಾವಣಗೆರೆ, ಏ.14-ಚುನಾವಣೆಗಾಗಿ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಚುನಾವಣಾಧಿಕಾರಿಯಾಗಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ಇಸ್ಲಾವುದ್ದೀನ್ ಗಡ್ಯಾಳ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ನೋಂದಣಿ, ಮತಗಟ್ಟೆ ರೂಪಿಸುವುದು, ಚೆಕ್‍ಪೆÇೀಸ್ಟ್‍ಗಳಲ್ಲಿ ನಿಗಾ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ತರಬೇತಿ ಸೇರಿದಂತೆ ಚುನಾವಣೆಗಾಗಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ದಾವಣಗೆರೆ ಉತ್ತರ ಕ್ಷೇತ್ರದಲ್ಲಿ 2,33,070 ಮತದಾರರು ಮತ್ತು ದಕ್ಷಿಣದಲ್ಲಿ 2,01,158 ಮತದಾರರು ಇದುವರೆಗೂ ನೋಂದಣಿಯಾಗಿದ್ದಾರೆ. ಏ.16 ರವರೆಗೂ ನೋಂದಣಿಗೆ ಅವಕಾಶವಿದ್ದು, ಏ.24 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಉತ್ತರಕ್ಕೆ 245 ಮತಗಟ್ಟೆಗಳು, ದಕ್ಷಿಣಕ್ಕೆ 211 ಮತಗಟ್ಟೆಗಳ ಅವಶ್ಯಕತೆ ಇದೆ ಎಂದು ಗುರುತಿಸಲಾಗಿದೆ. ದುರ್ಬಲ ವರ್ಗದವರು ಹೆಚ್ಚಾಗಿರುವ ದಾವಣಗೆರೆ ಉತ್ತರ ಕ್ಷೇತ್ರದ 8 ಮತಗಟ್ಟೆಗಳು ಹಾಗೂ ದಕ್ಷಿಣದ 7 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ