
ವಿಶ್ವಸಂಸ್ಥೆ, ಏ.14-ಜಮ್ಮುಕಾಶ್ಮೀರದ ಕಠುವಾದಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸï ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾಲಕಿ ಮೇಲೆ ನಡೆದ ಕೃತ್ಯದ ಭಯಾನಕತೆಯನ್ನು ಮಾಧ್ಯಮಗಳಿಂದ ನಾವು ತಿಳಿದಿದ್ದೇವೆ. ಪ್ರಕರಣದ ದುಷ್ಕರ್ಮಿಗಳಿಗೆ ಶಿಕ್ಷೆಯಾಗಿ ನ್ಯಾಯ ಸಿಗಲಿದೆ ಎಂಬ ಸಂಪೂರ್ಣ ಭರವಸೆ ಇದೆ ಎಂದು ಗುಟೆರಸ್ ತಿಳಿಸಿದ್ದಾರೆ ಎಂದು ಮಹಾಪ್ರಧಾನ ಕಾರ್ಯದರ್ಶಿ ಕಚೇರಿಯ ವಕ್ತಾರರು ಹೇಳಿದ್ದಾರೆ.