ನವದೆಹಲಿ,ಏ.14-ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕು ಎಂದು ಪ್ರತಿಪಾದಿಸಿದ್ದ ಶಿಯಾ ವಕ್ಫ್ ಮಂಡಳಿಯ ಮುಖ್ಯಸ್ಥ ವಾಸೀಮ್ ರಿಜ್ವಿ ಹತ್ಯೆಗೆ ಸಂಚು ರೂಪಿಸಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮೂವರು ಸಹಚರರನ್ನು ಬಂಧಿಸಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ಈ ಸಂಚಿನ ಉದ್ದೇಶವಾಗಿತ್ತು ಪೆÇಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬುಲಂದ್‍ಶೆರ್ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಸಲಿಮ್ ಅಹಮದ್ ಅನ್ಸಾರಿ, ಆರಿಫ್, ಅಬ್ರಾರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಮೂವರೂ ಕೂಡ ದಾವೂದ್ ಪರವಾಗಿ ಕೆಲಸ ಮಾಡುತ್ತಿದ್ದರು ಎನ್ನುವ ವಿಚಾರ ತಿಳಿದು ಬಂದಿದೆ.